ಜಿಲ್ಲೆ

ಗ್ಯಾರಂಟಿ ಅನುಷ್ಠ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ

ಸೌಮ್ಯ ಆರ್

ಬಂಟ್ವಾಳ: ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ತಾಲೂಕು ಪಂಚಾಯಿತಿಯಲ್ಲಿ ಪಂಚ ಗ್ಯಾರಂಟಿ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಹಿಂದಿನ ಸಭೆಯಲ್ಲಿ ್ಲೈಓವರ್ ನಿರ್ಮಾಣದ ಬಳಿಕ ಉಪ್ಪಿನಂಗಡಿಯಿಂದ ಬರುವ ಬಸ್‌ಗಳು ಮಾಣಿ ಜಂಕ್ಷನ್‌ಗೆ ಬರುವ ಬಗ್ಗೆ ನಿರ್ಣಯ ಕೈಗೊಂಡಿದ್ದು, ಈ ನಿರ್ಣಯಕ್ಕೆ ಸ್ಪಂದಿಸಿದ ಇಲಾಖೆ ಈ ಹಿಂದಿನಂತೆ ಮಾಣಿಯಲ್ಲಿ ಬಸ್ ನಿಲುಗಡೆಗೊಳಿಸುತ್ತಿದೆ ಎಂದು ಸಂಬಂಧಿಸಿದ ಇಲಾಖಾಧಿಕಾರಿ ಸಭೆಗೆ ತಿಳಿಸಿದರು.

ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಹಿನ್ನೆಲೆ ಬಂಟ್ವಾಳದಲ್ಲಿ ‘ಶಕ್ತಿ ಸಂಭ್ರಮ’ವನ್ನು ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಆಯೋಜನೆ ಮಾಡಿದ ಡಿಪೋ ಅಧಿಕಾರಿಯನ್ನು ಸಭೆಯಲ್ಲಿ ಅಭಿನಂದಿಸಲಾಯಿತು.

ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಾರ್ಯದರ್ಶಿ ಸಚಿನ್ ಕುಮಾರ್, ಪಂಚ ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.