ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದ ಬಳಿ ರಸ್ತೆ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ಲಕ್ಷ್ಮಣ ಪೂಜಾರಿ, ಮುರಿಗೆಪ್ಪ ಅಡಿಸೇರಿ, ಮಲಗೌಡ ಪಾಟೀಲ ಇತರರು ಇದ್ದರು. 
ಜಿಲ್ಲೆ

ಗ್ಯಾರಂಟಿ ಜಾರಿಯಲ್ಲಿ ಸರ್ಕಾರ ವಿಫಲ

ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾದರೂ ಅಭಿವದ್ಧಿ ಕೆಲಸಕ್ಕೆ ಅನುದಾನ ನೀಡಿಲ್ಲ. ಚುನಾವಣೆಯಲ್ಲಿ ಜನರಿಗೆ ಆಶ್ವಾಸನೆ ನೀಡಿ ಆಯ್ಕೆಯಾಗಿ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಲವಾಗಿದೆ ಎಂದು ಶಾಸಕ ದುರ್ಯೋಧನ ಐಹೊಳೆ ಆರೋಪಿಸಿದರು.

ತಾಲೂಕಿನ ಉಮರಾಣಿ ಗ್ರಾಮದಲ್ಲಿ ರಾಮಲಿಂಗಕೋಡಿ ಶಾಲೆಯಿಂದ ರಾಮಲಿಂಗೇಶ್ವರ ದೇವಸ್ಥಾನದವರೆಗೆ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ಬಿಜೆಪಿ ಎಂದಿಗೂ ವಿರೋಧ ಮಾಡಿಲ್ಲ. ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರಿಗೆ ಕೊಡುತ್ತೇವೆಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೇಲೆ ಜನರಿಗೆ ಸುಳ್ಳು ಹೇಳದೇ ಗ್ಯಾರಂಟಿ ಯೋಜನೆ ತಲುಪಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮದ ಆರಾಧ್ಯ ದೈವ ರಾಮಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸಲಾಗುವುದು. ಅಭಿವದ್ಧಿಗೆ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು. ರಾಯಬಾಗ ವಿಧಾನಸಭಾ ಕ್ಷೇತ್ರದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನ ಉತ್ತರ ಕರ್ನಾಟಕ ಸಮಗ್ರವಾಗಿ ಅಭಿವದ್ಧಿ ಕಾಣುವ ದಷ್ಟಿಯಿಂದ ಚರ್ಚೆ ನಡೆಯಬೇಕು. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಯಬಾಗ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಡಿ ತಾಲೂಕಿನ 17 ಹಳ್ಳಿಗಳಿಗೆ ಅನುಕೂಲವಾಗುವ ಕರಗಾಂವ ಏತ ನೀರಾವರಿ ಯೋಜನೆ ಮಂಜೂರು ಮಾಡಲಾಗಿತ್ತು. ಆದರೆ, ಈಗಿನ ಸರ್ಕಾರ ಯೋಜನೆಗೆ ಅನುದಾನ ಬಿಡುಗಡೆ ಮಾಡದೇ ತಡೆ ಹಿಡಿದಿದೆ. ತಕ್ಷಣ ಅನುದಾನ ಬಿಡುಗಡೆ ಮಾಡಿ ಏತ ನೀರಾವರಿ ಯೋಜನೆ ಕಾಮಗಾರಿ ಆರಂಭಿಸಬೇಕು. ಈ ಯೋಜನೆ ಕುರಿತು ಈ ಅಧಿವೇಶನದಲ್ಲಿ ಪ್ರಶ್ನೆ ಸಹ ಸರ್ಕಾರಕ್ಕೆ ಕೇಳಲಾಗುತ್ತದೆ. ಸರ್ಕಾರ ನೀರಾವರಿ ಯೋಜನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಆಗ್ರಹಿಸಿದರು.

ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಪೂಜೇರಿ, ಧುರೀಣ ಮುರಿಗೆಪ್ಪ ಅಡಿಸೇರಿ, ಧನಪಾಲ ಭೀಮನಾಯಿಕ, ರಾಜು ಜಿಡ್ಡಿಮನಿ, ರಾಜು ಮಗದುಮ್ಮ, ಬಸಗೌಡ ಪಾಟೀಲ, ಕೇದಾರಿಗೌಡ ಪಾಟೀಲ, ಪರಗೌಡ ಪಾಟೀಲ, ವಿವೇಕ ಸಂಭಾಜಿ, ಮಹಾದೇವ ಪೂಜೇರಿ, ಮಲಗೌಡ ಪಾಟೀಲ, ಶಿವಾನಂದ ಬಾಗೇವಾಡಿ, ಕರೆಪ್ಪ ಇಟ್ನಾಳೆ, ಮಹೇಶ ಪಾಟೀಲ, ಮಹೇಶ ಕೋರಿ ಉಪಸ್ಥಿತರಿದ್ದರು.