ಜಿಲ್ಲೆ

Guarantee plan ಜಾರಿಯಲ್ಲಿ ರಾಜ್ಯಕ್ಕೆ ಉತ್ತರ ಕನ್ನಡ ನಂಬರ್‌ 1

Uttara Kannada - Subash Hegde

ಕಾರವಾರ: ಪಂಚ ಗ್ಯಾರಂಟಿ ಯೋಜನೆ(Guarantee plan) ಗಳ ಅನುಷ್ಠಾನದಲ್ಲಿ ಉತ್ತರ ಕನ್ನಡ ಜಿಲ್ಲೆ ಇಡಿ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎಮ್. ರೇವಣ್ಣ ಹೇಳಿದರು

ಅವರು ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರ ಬಡ ಜನಸಾಮಾನ್ಯರ ಸಬಲೀಕರಣಕ್ಕಾಗಿ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗ್ಯಾರಂಟಿ ಯೋಜನೆಯಲ್ಲಿ ಒಳಪಡಿಸುವಲ್ಲಿ ಅಧಿಕಾರಿ ಸಿಬ್ಬಂದಿಗಳು ಪ್ರಮುಖ ಪಾತ್ರ ವಹಿಸಿದರ ಪರಿಣಾಮ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ತಳಮಟ್ಟದಿಂದ ಅಧಿಕಾರಿಗಳು ಸಿಬ್ಬಂದಿಗಳಿಂದ ಎಲ್ಳರಿಗೂ ಅಭಿನಂದನೆಗಳು ಎಂದರು.

ಗ್ಯಾರೆಂಟಿ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧ್ಯಕ್ಷರು ಅತ್ಯಂತ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ಯಾರೆಂಟಿ ಯೋಜನೆ ವಂಚಿತರ ಮನೆಗಳಿಗೆ ಭೇಟಿ ನೀಡಿ ಅವರಿಗೆ ಸೌಲಭ್ಯಗಳನ್ನು ಮಂಜೂರು ಮಾಡಿಸುತ್ತಿದ್ದೂ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಮೊದಲ ಪ್ರಶಸ್ತಿ ಉತ್ತರ ಕನ್ನಡ ಜಿಲ್ಲೆಗೆ ನೀಡಲಾಗುವುದು ಎಂದರು.

Guarantee plan

ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈ ಯೋಜನೆಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ಬಸ್ ಸಂಚಾರ ಮಾಡುವಂತೆ ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಸಾರಿಗೆ ಸಚಿವರ ಜೊತೆ ಚರ್ಚಿಸಿ ಹೆಚ್ಚಿನ ಹೊಸ ಬಸ್ ಮಂಜೂರು ಮಾಡಿಸಿಕೊಡಲಾಗುವುದು ಎಂದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಫಲಾನುಭವಿ ನೋಂದಣಿಗೆ ಕ್ರಮವಹಿಸಬೇಕು ಹಾಗೂ ಯುವನಿಧಿ ಫಲಾನುಭವಿಗಳಿಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜೊತೆ ಸೇರಿ ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಏರ್ಪಡಿಸುವಂತೆ ಸೂಚಿಸಿದ ಅವರು ಯವಜನತೆಯಿಂದ ಅಭಿಪ್ರಾಯ ಪಡೆದು ಅವಶ್ಯವಿರುವ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ಏರ್ಪಡಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.

Guarantee plan

ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಕೆ ಸೈಲ್, ಶಾಸಕರಾದ ಭೀಮಣ್ಣ ಟಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಡಿ ಉಳ್ವೇಕರ್, ಜಿಲ್ಲಾ ಗ್ಯಾರಂಟಿ ಯೊಜನೆಗಳ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಯಣ ಎಂ ಮತ್ತಿತರರು ಉಪಸ್ಥಿತರಿದ್ದರು.