ಬೀಳಗಿ ಪಟ್ಟಣದ ಸಿದ್ಧೇಶ್ವರ ಬ್ಯಾಂಕಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗ್ಯಾರಂಟಿ ಯೋಜನೆ ತಾಲೂಕು ಸಮಿತಿ ಅಧ್ಯಕ್ಷ ಅಣವೀರಯ್ಯ ಪ್ಯಾಠಿಮಠ ಮಾತನಾಡಿದರು. ಟಿಎಪಿಸಿಎಂ ಎಸ್ ಅಧ್ಯಕ್ಷ ಮಲ್ಲಪ್ಪ ಕಾಳಗಿ, ಸಮಿತಿ ಸದಸ್ಯರಾದ ಶ್ರೀಶೈಲ ಅಂಟಿನ ಇತರರಿದ್ದರು. 
ಜಿಲ್ಲೆ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ

ದತ್ತಾತ್ರೇಯ ಪಿ ಕುಲಕರ್ಣಿ

ಬೀಳಗಿ: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಯೋಜನೆ ಕೊಠಡಿ ಪೂಜಾ ಕಾರ್ಯಕ್ರಮ, ಸಮಿತಿ ಸದಸ್ಯರಿಗೆ ಕಾರ್ಯಾಗಾರ ಅ.22 ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಗ್ಯಾರಂಟಿ ಯೋಜನೆ ತಾಲೂಕು ಸಮಿತಿ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ತಿಳಿಸಿದರು.

ಪಟ್ಟಣದ ಸಿದ್ಧೇಶ್ವರ ಬ್ಯಾಂಕಿನಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಶಾಸಕ ಜೆ.ಟಿ. ಪಾಟೀಲ ಭಾಗವಹಿಸುವರು.

ಸರ್ಕಾರದ ಯೋಜನೆಯಾದ ಪಂಚ ಗ್ಯಾರಂಟಿ ನಿಲ್ಲುವುದಿಲ್ಲ. ಇದರಿಂದ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ. ವಿರೋಧ ಪಕ್ಷದವರು ಪಂಚ ಗ್ಯಾರಂಟಿ ಯೋಜನೆ ನಿಲ್ಲಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದು ಅದು ಸುಳ್ಳು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವುಕುಮಾರ ಅವರು ಜನಪರ ಕಾರ್ಯಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ವಿಧಾನ ಪರಿಷತ್ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು ಮತ್ತು ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಡಾ. ಸಾಗರ ತೆಕ್ಕೆನ್ನವರ ಹಾಗೂ ಜಿಲ್ಲೆಯ ಮತ್ತು ತಾಲೂಕಿನ ಎಲ್ಲ ಅಧಿಕಾರಿಗಳು ಭಾಗವಹಿಸುವರು ಎಂದು ತಿಳಿಸಿದರು.

ಟಿಎಪಿಸಿಎಂ ಎಸ್ ಅಧ್ಯಕ್ಷ ಮಲ್ಲಪ್ಪ ಕಾಳಗಿ, ಸಮಿತಿ ಸದಸ್ಯರಾದ ಶ್ರೀಶೈಲ ಅಂಟಿನ, ಪಪಂ ಮಾಜಿ ಅಧ್ಯಕ್ಷ ಅನಿಲ ಗಚ್ಚಿಮನಿ, ಶಿವಾನಂದ ಮಾದರ, ಚಂದ್ರಶೇಖರ ಪಂಡರಿ, ಹಣಮಂತ ಕಟ್ಟಿಪ್ಪನ್ನರ, ಉದಯ ರಜಪೂತ ಇದ್ದರು.