ಬೆಳಗಾವಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿದರು. ಶಂಕರ ಮಾಡಲಗಿ, ಪ್ರಮೋದ ಪಾಟೀಲ, ಬಾಬು ಸಾಕರೆ, ಶಿವು ಚವ್ಹಾಣ, ರವಿ ಶೀಗಿಹಳ್ಳಿ ಇತರರಿದ್ದರು. 
ಜಿಲ್ಲೆ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮರ್ಪಕವಾಗಲಿ

ಶಂಕರ ಗೆಜ್ಜಿ

ಬೆಳಗಾವಿ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕಾಂಗ್ರೆಸ್ ಸರ್ಕಾರ ವಿಲವಾಗಿದೆ. ಸಮರ್ಪಕ ಅನುಷ್ಠಾನಕ್ಕೆ ರಾಜ್ಯಪಾಲರು ಆದೇಶಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ನಗರದ ಚನ್ನಮ್ಮನ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಘೋಷಿಸಿತು. ಆಗಿನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗ್ಯಾರಂಟಿ ಯೋಜನೆ ಕಾರ್ಡ್ ನಾಡಿನ ಮನೆಮನೆಗೆ ಹಂಚಿ ಗದ್ದುಗೆ ಏರಿದರು. ಈಗ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ರಾಜ್ಯಸರ್ಕಾರಕ್ಕೆ ರಾಜ್ಯಪಾಲರು ಎಚ್ಚರಿಕೆ ನೀಡಬೇಕು ಎಂದು ಆಗ್ರಹಿಸಿದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಪ್ರಮೋದ ಪಾಟೀಲ, ಬಾಬು ಸಾಕರೆ, ಶಿವು ಚವ್ಹಾಣ, ರವಿ ಶೀಗಿಹಳ್ಳಿ, ಬಾಳುಗೌಡ ಪಾಟೀಲ, ಅಶೋಕ ಪಾಟೀಲ ಇತರರಿದ್ದರು.