ಬಂಟ್ವಾಳ: ತಾಲೂಕುಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಬಿ.ಸಿ.ರೋಡ್‌ನ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ನೂತನ ಕಚೇರಿ ಉದ್ಘಾಟಿಸಿದರು. ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಮಿತಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿ ಎಂದರು.
ಜಿಲ್ಲಾ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿಕುಂದರ್, ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಜಿ.ಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಪಕ್ಷ ಪ್ರಮುಖರಾದ ಪಿಯೂಸ್ ಎಲ್.ರೋಡ್ರಿಗಸ್, ಸುದೀಪ್‌ಕುಮಾರ್ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಚಂದ್ರಶೇಖರ ಭಂಡಾರಿ, ಜೆಸಿಂತಾ ಡಿಸೋಜ, ಅಶ್ಬನಿ ಕುಮಾರ್ ರೈ, ಸುದರ್ಶನ ಜೈನ್, ಕೆ.ಸಂಜೀವ ಪೂಜಾರಿ, ಮಾಯಿಲಪ್ಪ ಸಾಲ್ಯಾನ್, ಸುರೇಶ್ ಕುಮಾರ್ ನಾವೂರು, ಬಂಟ್ವಾಳ ತಾಲೂಕುಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸುಧೀಂದ್ರ ಶೆಟ್ಟಿ, ಮಹಮ್ಮದ್ ಸಿರಾಜ್, ಎಂ.ಯು.ಸತೀಶ್, ಮುರಳೀಧರ್ ವೈ, ವಿನಯಕುಮಾರ್, ಕಾಂಚಲಾಕ್ಷಿ, ಐಡಾ ಸುರೇಶ್, ಹರ್ಷನ್, ಬಿ.ಪವಿತ್ರ, ಚಂದ್ರಶೇಖರ ಆಚಾರ್ಯ, ಅಬ್ದುಲ್ ಮಜೀದ್, ಜನಾರ್ದನ ಸಪಲ್ಯ, ಕೃಷ್ಣಪ್ಪ ಪೂಜಾರಿ, ಎನ್.ಅಬ್ದುಲ್ ಕರೀಂ ಉಪಸ್ಥಿತರಿದ್ದರು. ಸದಸ್ಯ ಕಾರ್ಯದರ್ಶಿ ಸಚಿನ್ ಕುಮಾರ್ ಸ್ವಾಗತಿಸಿ, ವಂದಿಸಿದರು.