ಜಿಲ್ಲೆ

ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

ಸೌಮ್ಯ ಆರ್

ಉಳ್ಳಾಲ: ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮಂಗಳೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ 85044 ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೂ 305,04,48000 ರೂ. ಮಂಜೂರಾಗಿದೆ ಎಂದು ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಾಹಿತಿ ನೀಡಿದರು.

ಮಂಗಳೂರು, ಗುರುಪುರ, ಕೈಕಂಬ, ಬಜ್ಪೆ ಮೂಲಕ ಕಟೀಲ್ ಮತ್ತು ವಾಮಂಜೂರು ಪರಾರಿ ಮೂಲಕ ಉಳಾಯಿಬೆಟ್ಟುಗೆ ಸರ್ಕಾರಿ ಬಸ್‌ಗಳ ಸೇವೆ ಒದಗಿಸಿಕೊಡುವುದರ ಬಗ್ಗೆ ಸದಸ್ಯರು ಚರ್ಚಿಸಿದರು. ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು ಕರಪತ್ರ ಬಿಡುಗಡೆಗೊಳಿಸಲಾಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಅಲ್‌ಸ್ಟನ್ ಡಿಕುನ್ಹ, ತಾಲೂಕು ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ಪ್ರಶಾಂತ್ ಎಸ್., ನವಾಝ್, ಶೈಲಾ, ನೀತಾ ಡಿಸೋಜ, ಮೊಹಮ್ಮದ್ ರಫೀಕ್, ರಿತೇಶ್ ಅಂಚನ್, ಜಯಂತಿ, ವಿದ್ಯಾ, ಡಿ.ಎಂ.ಮುಸ್ತಾಫ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾಪಂ ಅಧಿಕಾರಿಗಳು, ತಾಲೂಕು ಐಇಸಿ ಸಂಯೋಜಕರು ಉಪಸ್ಥಿತರಿದ್ದರು.

ತಾಪಂ ಸಹಾಯಕ ಲೆಕ್ಕಾಧಿಕಾರಿ ಪರಮೇಶ್ವರ ಸ್ವಾಗತಿಸಿದರು. ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ವಂದಿಸಿದರು.