ಹನುಮನಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತ ಸಮಾಲೋಚನಾ ಸಭೆಯನ್ನು ಸಂಸದ ರಾಜಶೇಖರ ಹಿಟ್ನಾಳ ಉದ್ಘಾಟಿಸಿದರು. ದಿಶಾ ಸಮಿತಿ ಸದಸ್ಯ ದೊಡ್ಡಬಸನಗೌಡ ಪಾಟೀಲ್ ಬಯ್ಯಪುರ, ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲಪ್ಪ ತಳವಾರ, ಜಿಪಂ ಮಾಜಿ ಅಧ್ಯಕ್ಷೆ ಮಾಲತಿ ನಾಯಕ, ಮಾಜಿ ಸದಸ್ಯ ನೇಮಣ್ಣ ಮೇಲಸಕ್ರಿ ಇತರರಿದ್ದರು. 
ಜಿಲ್ಲೆ

ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ

ಹನುಮಸಾಗರ: ರಾಜ್ಯದ ಜನರು ಸ್ವಾವಲಂಬಿ ಜೀವನ ನಡೆಸಲು ಕಾಂಗ್ರೆಸ್‌ನ ಜನಪರ ಯೋಜನೆಗಳು ಸಹಕಾರಿಯಾಗಿವೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ಸಮೀಪದ ಹನುಮನಾಳ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ. ವಿವಿಧ ರಾಜಕೀಯ ಪಕ್ಷಗಳು ಗ್ಯಾರಂಟಿಗಳನ್ನು ನಕಲು ಮಾಡುತ್ತಿವೆ. ಸರ್ಕಾರ ಸಾರ್ವಜನಿಕರಿಗಾಗಿ ಅನುದಾನ ಬಳಸಿದೆ. ಬಿಜೆಪಿ ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಆದ್ದರಿಂದ ವಿನಾಕಾರಣ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ. ಕಾರ್ಯಕರ್ತರು ಪಕ್ಷದ ಯೋಜನೆಗಳನ್ನು ಜನರಿಗೆ ತಿಳಿಸಬೇಕು. ಪ್ರಚಾರದ ಕೊರತೆಯಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ ಎಂದರು.

ದಿಶಾ ಸಮಿತಿ ಸದಸ್ಯ ದೊಡ್ಡಬಸನಗೌಡ ಪಾಟೀಲ್ ಬಯ್ಯಪುರ, ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲಪ್ಪ ತಳವಾರ, ಜಿಪಂ ಮಾಜಿ ಅಧ್ಯಕ್ಷೆ ಮಾಲತಿ ನಾಯಕ, ಮಾಜಿ ಸದಸ್ಯ ನೇಮಣ್ಣ ಮೇಲಸಕ್ರಿ, ಪ್ರಮುಖರಾದ ಕೆ.ಬಿ.ತಳವಾರ, ಲಾಡ್ಲೇಮಸಾಕ ದೋಟಿಹಾಳ, ಪ್ರಕಾಶ ರಾಠೋಡ, ಸುರೇಶ ಕುಂಟನಗೌಡ್ರ, ಮೈನುದ್ದಿನ ಖಾಜಿ, ಮಹಾಂತೇಶ ಅಗಸಿಮುಂದಿನ, ವಿಶ್ವನಾಥ ಕನ್ನೂರು, ಸೋಮಶೇಖರ ವೈಜಾಪುರ ಇತರರಿದ್ದರು.