ವಿಜಯವಾಣಿ ಸುದ್ದಿಜಾಲ ಧಾರವಾಡ
ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ, ವಿಧಾನಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಏ. 5ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆ ವಹಿಸುವರು. ಸಂಬ೦ಧಿಸಿದ ಇಲಾಖೆಗಳ ಅಧಿಕಾರಿಗಳು ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ಜಿ.ಪಂ. ಸಿಇಒ ಭುವನೇಶ ಪಾಟೀಲ ತಿಳಿಸಿದ್ದಾರೆ.