ಮಡಿಕೇರಿ:
ಮಡಿಕೇರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಮಡಿಕೇರಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷ ಎಂ.ಜಿ. ಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ಅನುಷ್ಠಾನ ಇಲಾಖೆಗಳಾದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ, ಶಿಶು ಅಭಿವೃದ್ದಿ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಾಹಿತಿ ನೀಡಿರು.
ಈ ಸಂದರ್ಭ ಮಾತನಾಡಿದ ಎಂ.ಜಿ.ಮೋಹನ್ ದಾಸ್, ಮಡಿಕೇರಿ ತಾಲೂಕಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ಅನುಷ್ಠಾನ ಇಲಾಖೆಗಳು ಉತ್ತಮ ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿಯೂ ಸಹ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿಗಳು ಸರ್ಕಾರದ ಮಹಾತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಯನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲು ಶ್ರಮಿಸಬೇಕು.
ಗ್ಯಾರಂಟಿ ಯೋಜನೆ ಮತ್ತಷ್ಟು ಪರಿಣಾಮಕಾರಿ ಅನುಷ್ಠಾನ ಸಂಬAಧ ಗ್ರಾಮ ಪಂಚಾಯತಿ ಮಟ್ಟದಲ್ಲಿ ಫಲಾನುಭವಿಗಳ ಕುಂದುಕೊರತೆ ಸಭೆ ಮಾಡಬೇಕಿದೆ. ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೆ. 10ರಂದು ಗ್ಯಾರಂಟಿ ಯೋಜನೆಗೆ ಸಂಬAಧಿಸಿದAತೆ ಕುಂದು ಕೊರತೆ ಸಭೆ ಆಯೋಜಿಸುವುದಾಗಿ ಹೇಳಿದರು.
ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದ ಸಭೆಯಲ್ಲಿ 5 ಗ್ಯಾರಂಟಿ ಯೊಜನೆಗಳಿಗೆ ಸಂಬAಧಿಸಿದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಸೂಕ್ತ ಪರಿಹಾರವನ್ನು ಸೂಚಿಸುವಂತೆಯೂ ತಿಳಿಸಿದರು. ತಾಲೂಕು ಪಂಚಾಯಿತಿ ಇಒ ಶೇಖರ್ ಮತ್ತು ಸಮಿತಿ ಸದಸ್ಯರು ಇದ್ದರು.