ಹೆಜಮಾಡಿ ಗ್ರಾಪಂ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು 
ಜಿಲ್ಲೆ

ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಇಂದಿರಾ ಎನ್ ಕೆ

ಪಡುಬಿದ್ರಿ: ಹೆಜಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದ್ರತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು.

ಈ ರಸ್ತೆ ಅಭಿವೃದ್ಧಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ. ಹೆಜಮಾಡಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಮೆಂಡನ್, ಉಪಾಧ್ಯಕ್ಷ ಮೋಹನ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಗ್ರಾಪಂ ಸದಸ್ಯರಾದ ಜನಾರ್ದನ ಕೋಟ್ಯಾನ್, ಬಬಿತಾ ಪುರುಷೋತ್ತಮ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶರಣ್‌ಕುಮಾರ್ ಮಟ್ಟು, ಪಡುಬಿದ್ರಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಪಕ್ಷದ ಪ್ರಮುಖರಾದ ಮಿಥುನ್ ಆರ್.ಹೆಗ್ಡೆ, ಪಾಂಡುರಂಗ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.