ಮೈಸೂರು: ಎಲ್ಲ ಜಾತಿ, ಧರ್ಮದವರಿಗೂ ರಾಜಕೀಯ ಮೀಸಲಾತಿ ಕಲ್ಪಿಸಿಕೊಡುವ ಜತೆಗೆ ಸಾಮಾಜಿಕ ನ್ಯಾಯ ಒತ್ತು ನೀಡಿದ ಡಿ.ದೇವರಾಜ ಅರಸು ಅವರು ಸದಾ ಕಾಲಕ್ಕೂ ನೆನಪಿನಲ್ಲಿ ಉಳಿಯುವ ನಾಯಕರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ನಗರದ ಹೊಸ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಡಿ.ದೇವರಾಜ ಅರಸು ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.
ಒಂದು ನಿವೇಶನ ಕೊಡಲು ಸಾಧ್ಯವಾಗದ ಸಂದರ್ಭದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಹಂಚಿ ಭೂ ಒಡೆಯರನ್ನಾಗಿ ಮಾಡಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ ಎಂದರು.