ಜಿಲ್ಲೆ

ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ: ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ

ಕೆ.ಎನ್.ರಾಘವೇಂದ್ರ

ಮಂಡ್ಯ: ತಾಲೂಕಿನ ತೂಬಿನಕೆರೆ ಸರ್.ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರದ ಇಂಗ್ಲೀಷ್, ಪಾಲಿಮರ್ ಸೈನ್ಸ್, ವಾಣಿಜ್ಯಶಾಸ್ತ್ರ, ಎಂಎಸ್‌ಡಬ್ಲ್ಯು, ರಸಾಯನಶಾಸ್ತ್ರ, ಗಣಿತಶಾಸ್ತ್ರ, ರಾಜ್ಯಶಾಸ್ತ್ರ, ಭೌತಶಾಸ್ತ್ರ, ಇತಿಹಾಸ ವಿಭಾಗಕ್ಕೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಆಯ್ಕೆಗೆ ಮೈಸೂರು ವಿಶ್ವವಿದ್ಯಾಲಯದ ನಿಯಮಾವಳಿಗಳ ಪ್ರಕಾರ 2024-25 ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ ನಡೆಯಲಿದೆ. ಅರ್ಹ ಮತ್ತು ಆಸಕ್ತರು ನಿಗದಿತ ನಮೂನೆಯ ಅರ್ಜಿಯ 2 ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗಾಗಿ ಮಂಡ್ಯ ವಿಶ್ವವಿದ್ಯಾಲಯದ ವೆಬ್‌ಸೈಟ್ ವಿಳಾಸ https:mandyauniversity.karnataka.gov.in ನಲ್ಲಿ ಪಡೆಯುವುದು ಎಂದು ವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.