ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ
ದೇಶದ ಅಭಿವೃದ್ಧಿಗೆ ವಿದ್ಯಾರ್ಥಿಗಳು ತಮ್ಮ ಕೊಡುಗೆಯನ್ನು ಸಲ್ಲಿಸಬೇಕಾದಲ್ಲಿ ಅವರಿಗೆ ಪಾಲಕರು ಮತ್ತು ಶಿಕ್ಷಕರು ಸರಿಯಾದ ವಾರ್ಗದರ್ಶನ ನೀಡಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಹಲುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ನೋಟ್‌ಪುಸ್ತಕ ವಿತರಣೆ ಹಾಗೂ ಆಂಗ್ಲ ಮಾಧ್ಯಮ ಉದ್ಘಾಟನಾ ಸವಾರಂಭದಲ್ಲಿ ಮಾತನಾಡಿದರು.
ಹಲುವಳ್ಳಿ ಶಾಲೆ ಅಭಿವೃದ್ಧಿಗೆ ಶ್ರಮಿಸುತ್ತಿರುವ ಉದ್ಯಮಿ, ದಾನಿ ಸುಗ್ಗಿ ಸುಧಾಕರ ಶೆಟ್ಟಿ ವಾತನಾಡಿ ಊರಿನ ಅಭಿವೃದ್ಧಿಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ. ಊರಿನ ಶಾಲೆ, ದೇವಾಲಯದ ಬಗ್ಗೆ ಜನರು ವಿಶೇಷ ಕಾಳಜಿ ಹೊಂದಬೇಕು ಎಂದರು.
ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕಗಳನ್ನು ನೀಡಿದ ಕೋಟೇಶ್ವರ ಎಚ್‌ಎಸ್‌ಎನ್ ಫೌಂಡೇಶನ್ ಅಧ್ಯಕ್ಷ ಶಂಕರ ಐತಾಳ್ ವಾತನಾಡಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸದಿದ್ದರೆ ಆ ಶಾಲೆಗಳು ಮುಚ್ಚುವ ಹಂತಕ್ಕೆ ಬರಲಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ವಾತನಾಡಿದರು. ಟಿಪಿಒ ನಿತ್ಯಾನಂದ ಶೆಟ್ಟಿ, ಯೂತ್ ಕ್ಲಬ್ ಅಧ್ಯಕ್ಷ ಸುಧಾಕರ ಹಲುವಳ್ಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಇನಕರ ಶೆಟ್ಟಿ, ಸದಸ್ಯ ಪ್ರಭಾಕರ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷೆ ಸುಮತಿ, ಬಿಜೆಪಿ ಗ್ರಾವಾಂತರ ಅಧ್ಯಕ್ಷ ರಾಜೀವ ಕುಲಾಲ್, ಸಿಆರ್‌ಪಿ ಲಲಿತಾ ಉಪಸ್ಥಿತರಿದ್ದರು. ದಾನಿಗಳಾದ ಸುಧಾಕರ ಶೆಟ್ಟಿ ಹಾಗೂ ಶಂಕರ ಐತಾಳ್, ಹರೀಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಶಂಕರ ಐತಾಳ್, ಸುಮತಿ ಸ್ವಾಗತಿಸಿದರು. ಶಿಕ್ಷಕಿ ಸರಿತಾ ವಂದಿಸಿದರು. ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ನಿರೂಪಿಸಿದರು.