ಜಿಲ್ಲೆ

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧವಾಗುವವರಿಗೆ ಮಾರ್ಗದರ್ಶನ ಕಾರ್ಯಕ್ರಮ

ಶ್ರೀಕಾಂತ್ ಶೇಷಾದ್ರಿ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಆವರಣದಲ್ಲಿ ಫೆ.1 ಮತ್ತು 2ರಂದು 'ಕೋಚಿಂಗ್ ಗುರು' ಹೆಸರಿನಲ್ಲಿ ಮೆಗಾ ಕೋಚಿಂಗ್ ಎಕ್ಸ್‌ಪೋ ನಡೆಯಲಿದೆ. ಈ ಎಕ್ಸ್‌ಪೋನಲ್ಲಿ ನೀಟ್, ಸಿಇಟಿ, ಜೆಇಇ, ಕೆಪಿಎಸ್ಸಿ, ಯುಪಿಎಸ್ಸಿ, ಕ್ಯಾಟ್, ಸಿಎ, ಪಿಎಸ್‌ಐ, ಪಿಡಿಒ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಮಾರ್ಗದರ್ಶನ ಮಾಡುತ್ತಿರುವ ಕೋಚಿಂಗ್ ಸೆಂಟರ್ ಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಲಿವೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದವಾಗುತ್ತಿರುವ ವಿದ್ಯಾರ್ಥಿಗಳಿಗೆಂದೇ ಈ ವಿನೂತನ ಎಕ್ಸ್ ಪೋ ಆಯೋಜಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧವಾಗುವ ವಿದ್ಯಾರ್ಥಿಗಳು ಏನೆಲ್ಲಾ ಕ್ರಮಗಳನ್ನು ಅನುಸರಿಸಬೇಕು, ಯಾವ ಕೋಚಿಂಗ್ ಸೆಂಟರ್‌ ನ್ನ ಆಯ್ಕೆ ಮಾಡಿಕೊಳ್ಳಬೇಕು, ಅವರಿಂದ ಯಾವ ರೀತಿಯ ಮಾರ್ಗದರ್ಶನ ಪಡೆಯಬೇಕು ಎನ್ನುವ ಬಗ್ಗೆ ವಿದ್ಯಾರ್ಥಿಗಳಿಗೆ ಎಕ್ಸ್‌ಪೋದಲ್ಲಿ ಮಾರ್ಗದರ್ಶನ ಸಿಗಲಿದೆ. ವಿಶೇಷವೆಂದರೆ ಬಡವರಿಗೆ ಸ್ಕಾಲರ್ ಶಿಪ್ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಎಕ್ಸ್‌ಪೋದಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬಹುದು.