ಜಿಲ್ಲೆ

ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದೇ ಸವಾಲು

ಕಿರಣ್ ಮಾದರಹಳ್ಳಿ

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನದಿಂದ ಪ್ರತಿಯೊಬ್ಬರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ತುಂಬ ಸವಾಲಾಗುತ್ತಿದೆ ಎಂದು ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜೆ.ಜೆ.ಶಿವಕುಮಾರ್ ಹೇಳಿದರು.

ಗುರುವಾರ ಪಟ್ಟಣದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ತಮ್ಮ ಕಾರ್ಯಕ್ಷೇತ್ರದಲ್ಲಿ ಉಂಟಾಗುವ ಒತ್ತಡ, ತಾರತಮ್ಯ ಮುಂತಾದ ಕಾರಣಗಳಿಂದ ಮಾನಸಿಕ ಒತ್ತಡಗಳು ಹೆಚ್ಚಾಗುತ್ತಿವೆ. ಆದ್ದರಿಂದ ಪ್ರತಿಯೊಬ್ಬರ ಮಾನಸಿಕ ಸದೃಢತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸರ್ಕಾರ ಮಾನಸಿಕ ಆರೋಗ್ಯ ದಿನಾಚರಣೆ ಆಯೋಜಿಸುತ್ತಿದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಶಾ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಂಜುನಾಥ್, ವಕೀಲರ ಸಂಘದ ಪದಾದಿಕಾರಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.