ಜಿಲ್ಲೆ

ಯುವತಿ ಪತ್ತೆಗೆ ಸಹಕರಿಸಲು ಮನವಿ

ಕಿರಣ್ ಮಾದರಹಳ್ಳಿ

ಗುಂಡ್ಲುಪೇಟೆ: ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ಬಿಂದು(21) ಎಂಬ ವಿದ್ಯಾರ್ಥಿನಿ ಕಾಣೆಯಾಗಿದ್ದು, ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ. ಬಿಂದು 5.3 ಅಡಿ ಎತ್ತರ, ಗೋಧಿ ಮೈ ಬಣ್ಣ, ಗುಂಡು ಮುಖ ಹೊಂದಿರುತ್ತಾರೆ. ಇವರ ಸುಳಿವು ದೊರೆತಲ್ಲಿ ಬೇಗೂರು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.