ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2018ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಗುಂಜನ್ ಆರ್ಯ, ಗುಪ್ತಚರ ಇಲಾಖೆ ವರಿಷ್ಠಾಧಿಕಾರಿಯಾಗಿದ್ದರು. ನಿಕಟಪೂರ್ವ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ಗೋಪಾಲ ಬ್ಯಾಕೋಡ ಅವರನ್ನು ಬೆಂಗಳೂರಿನ ಫಾರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿಯ ಜಂಟಿ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.