ಮುಂಡರಗಿ: ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕಾದರೆ ಗುರುವಿನ ಮಾರ್ಗದರ್ಶನ ಮತ್ತು ನಿರ್ದಿಷ್ಟ ಗುರಿ ಹೊಂದಬೇಕು. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದ ಜತೆಗೆ ವಿವಿಧ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಾಧನೆ ಮಾಡಲು ಮುಂದಾಗಬೇಕು ಎಂದು ಶಿಂಗಟಾಲೂರ ಶ್ರೀ ವೀರಭದ್ರೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ಹೇಳಿದರು.
ಪಟ್ಟಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆಎಂಎಫ್ ನಿರ್ದೇಶಕ ಲಿಂಗರಾಜಗೌಡ ಪಾಟೀಲ ಮಾತನಾಡಿ, ಶಿಕ್ಷಣದೊಂದಿಗೆ ಎಲ್ಲ ರಂಗದಲ್ಲಿ ಮುಂದಿದ್ದರೆ ಬದುಕು ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳು ಸದಾ ಯಶಸ್ಸಿನ ಹಾದಿಯಲ್ಲಿ ನಡೆಯಲು ಮುಂದಾಗಬೇಕು ಎಂದು ತಿಳಿಸಿದರು.
ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಅಮಿನಸಾಬ ಬೀಸನಳ್ಳಿ ಮಾತನಾಡಿದರು. ರಜನಿಕಾಂತ ದೇಸಾಯಿ ನೇತೃತ್ವದಲ್ಲಿ ಸಾಧಕ ವಿದ್ಯಾರ್ಥಿಗಳಾದ ವಿಶ್ವನಾಥ ಮಾವಳಿ, ಸುದೀಪ ಹೊಂಬಳಗಟ್ಟಿ, ಶ್ರೀರಕ್ಷಾ ಅಳವಂಡಿ, ನಿಂಗಪ್ಪ ಕಟ್ಟಿಮನಿ, ತುಳಸಿ ಅಳವಂಡಿ ಅವರನ್ನು ಸನ್ಮಾನಿಸಲಾಯಿತು. ಎಸ್.ವಿ. ಪಾಟೀಲ, ಎಸ್.ವಿ. ಚವಡಿ, ನಾಗರಾಜ ಕೊರ್ಲಹಳ್ಳಿ, ಪವನ ಮೇಟಿ, ಶಿವಾನಂದ ಕಮತರ ಸಿದ್ದು ದೇಸಾಯಿ, ಮಂಜುನಾಥ ಮುಧೋಳ, ಮುತ್ತು ಅಳವಂಡಿ, ಆರ್.ವೈ. ಪಾಟೀಲ, ಸೋಮು ಹಕ್ಕಂಡಿ ಇತರರು ಇದ್ದರು.