ಜಿಲ್ಲೆ

ಕೋರಂಗಲ ಶಾಲೆಯಲ್ಲಿ ಗುರುವಂದನೆ

ನಾಪೋಕ್ಲು: ಭಾಗಮಂಡಲ ಕೋರಂಗಲ ಗ್ರಾಮದ ವಾಜಪೇಯಿ ವಸತಿ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ವಿನೂತನ ರೀತಿಯಲ್ಲಿ ಗುರುವಂದನ ಕಾರ್ಯಕ್ರಮ ಆಚರಿಸಿದರು.

ವಾಜಪೇಯಿ ವಸತಿ ಶಾಲೆಯಲ್ಲಿ ಇರುವ ಶಿಕ್ಷಕರು, ಸಿಬ್ಬಂದಿಗೆ ಗುರುದಕ್ಷಿಣೆಯನ್ನು ನೀಡಿ ಕೃತಜ್ಞತೆ ಸಲ್ಲಿಸಿದರು. ಜತೆಗೆ ಸಿಹಿ ಹಂಚಿ ವಿದ್ಯಾರ್ಥಿಗಳು ಹಾಗೂ ಪಾಲಕರು ಸಂಭ್ರಮಿಸಿದರು.

ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ ಮಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಮಕ್ಕಳ ಮುಂದಿನ ಭವಿಷ್ಯವನ್ನು ರೂಪಿಸುವ ಗುರುಗಳಿಗಾಗಿ ಇಂಥ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಹಾಗೂ ಪಾಲಕರೇ ಆಯೋಜಿಸಿರುವುದು ಮಾದರಿಯಾಗಿದೆ ಎಂದರು.

ಅಧ್ಯಕ್ಷತೆಯನ್ನು ಪಾಲಕರಾದ ಮಂಜುಳಾ ಮನೋಜ್ ವಹಿಸಿದ್ದರು. ಶಿವ ಪಂಜಿಕೋಡಿ ಕಾರ್ಯಕ್ರಮ ನಿರೂಪಿಸಿದರು. ಶೋಭಾ, ಶಾಲೆಯ ಮುಖ್ಯ ಶಿಕ್ಷಕ ಲೋಕೇಶ್, ಶಾಲೆಯ ಸಿಬ್ಬಂದಿ, ಪಾಲಕರು ಉಪಸ್ಥಿತರಿದ್ದರು.