ಜಿಲ್ಲೆ

ಜೆಎಸ್‌ಎಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಗುರುಪೂರ್ಣಿಮೆ

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ವಿದ್ಯಾಗಿರಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ ಗುರುಪೂರ್ಣಿಮೆ ಅಂಗವಾಗಿ 10ನೇ ತರಗತಿಯ ವಿದ್ಯಾರ್ಥಿಗಳ ಪಾಲಕರಿಗಾಗಿ ಶನಿವಾರ ಪಾದಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. 200ಕ್ಕೂ ಹೆಚ್ಚು ಪಾಲಕರು ಪಾಲ್ಗೊಂಡು ಮಕ್ಕಳಿಂದ ಪಾದಪೂಜೆ ನೆರವೇರಿಸಿಕೊಂಡರು
ಅತಿಥಿಯಾಗಿ ಪಾಲ್ಗೊಂಡಿದ್ದ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಮಾತನಾಡಿ, ಮಕ್ಕಳಲ್ಲಿ ನೈತಿಕತೆ ಬೆಳೆಸುವ ಕಾರ್ಯ ಮಾಡಿದ್ದು ಶ್ಲಾಘನೀಯ ಎಂದರು.
ಡಾ. ಶ್ರೀಶಾಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆಎಸ್‌ಎಸ್ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾದ್ಯೆ, ಇತರರಿದ್ದರು. ಪ್ರಾಚಾರ್ಯೆ ಸಾಧನಾ ಎಸ್. ಸ್ವಾಗತಿಸಿದರು. ಸುಕನ್ಯಾ ಎಸ್. ವಂದಿಸಿದರು.
ಮಕ್ಕಳು ಗುರುಗಳ ವೇಷಧಾರಿಗಳಾಗಿ ಪಾಲ್ಗೊಂಡು ಗಮನ ಸೆಳೆದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.