ಜಿಲ್ಲೆ

ಗುರುಗಳು ವಿದ್ಯಾರ್ಥಿಗಳಿಗೆ ಪ್ರೇರಕ ಶಕ್ತಿ

ವಿಜಯವಾಣಿ ಸುದ್ದಿಜಾಲ ಧಾರವಾಡ
ಗುರುಗಳು ವಿದ್ಯಾರ್ಥಿಗಳಿಗೆ ಪ್ರೇರಕ ಶಕ್ತಿ. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಗೆಡುವುದು ಅವರ ಆದ್ಯತೆಯಾಗಬೇಕು. ಉತ್ತಮ ಶಿಕ್ಷಣ ದೊರೆಯುವುದು ಉತ್ತಮ ಕಟ್ಟಡಗಳಿಂದಲ್ಲ, ಅಲ್ಲಿರುವ ಶಿಕ್ಷಕರಿಂದ ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜೀವಂಧಕುಮಾರ ಹೇಳಿದರು.
ನಗರದ ಸವದತ್ತಿ ರಸ್ತೆಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಅಭಿವೃದ್ಧಿಯಾಗಬೇಕಾದರೆ ಅಲ್ಲಿಯ ಶಿಕ್ಷಣ ವ್ಯವಸ್ಥೆ ಉತ್ತಮವಾಗಿರಬೇಕು ಎಂದರು.
ಅತಿಥಿಯಾಗಿ ಪಾಲ್ಗೊಂಡಿದ್ದ ಜೆಎಸ್‌ಎಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಮಾತನಾಡಿ, ಈ ರೀತಿಯ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಆಚಾರ ವಿಚಾರಗಳ ತಿಳಿವಳಿಕೆ, ಒಗ್ಗಟ್ಟು ಮೂಡುತ್ತದೆ ಎಂದರು.
ವಿದ್ಯಾರ್ಥಿಗಳು ಮಹಾಭಾರತ, ರಾಮಾಯಣ, ಗುರುಕುಲ ಪದ್ಧತಿ, ಜಿನಾಲಯ, ಸಾಯಿಬಾಬಾ, ಡಾ. ವೀರೇಂದ್ರ ಹೆಗ್ಗಡೆ, ಪೇಜಾವರ ಶ್ರೀಗಳು, ಸಿದ್ಧೇಶ್ವರ ಸ್ವಾಮೀಜಿ, ಮುರುಘಾಮಠದ ಮಹಾಂತಪ್ಪಗಳ ಸೇರಿ ಮಹನೀಯರ ಛದ್ಮವೇಷ ಧರಿಸಿ ಗಮನ ಸೆಳೆದರು.