ಕೋಟ: ಓರ್ವ ವಿದ್ಯಾರ್ಥಿ ಸಾಧನೆ ಅಥವಾ ಅವನ ಜೀವನದ ತಳಹದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಹೇಳಿದರು.
ಕೋಟದ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲ ನೇತೃತ್ವದಲ್ಲಿ ವಿಪ್ರ ಮಹಿಳಾ ಸಾಲಿಗ್ರಾಮ ವಲಯದ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಕೆ.ರಾಜಾರಾಮ್ ಐತಾಳ್ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಕೋಟ ಪಂಚವರ್ಣ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಮಾಜಿ ಅಧ್ಯಕ್ಷ ಚಂದ್ರ ನಾಯರಿ, ಸಾಮಾಜಿಕ ಕಾರ್ಯಕರ್ತ ಕೋಟ ಶ್ರೀಕಾಂತ್ ಶೆಣೈ, ವಿಪ್ರ ಮಹಿಳಾ ಸಾಲಿಗ್ರಾಮ ವಲಯ ಸಂಚಾಲಕಿ ವನೀತಾ ಉಪಾಧ್ಯಾ, ಪಂಚವರ್ಣ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಸಂಘಟನೆ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರು. ಸದಸ್ಯ ಸಂತೋಷ್ ಕುಮಾರ್ ಕೋಟ ಸನ್ಮಾನಪತ್ರ ವಾಚಿಸಿದರು. ಪಂಚವರ್ಣ ಮಹಿಳಾ ಮಂಡಲ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿದರು. ಸದಸ್ಯ ಶಶಿಧರ ತಿಂಗಳಾಯ ವಂದಿಸಿದರು.