ಜಿಲ್ಲೆ

ಎಚ್​​ಡಿಕೆ ಆರೋಗ್ಯ ಸ್ಥಿರವಾಗಿದೆ: ಅಪೋಲೋ ಆಸ್ಪತ್ರೆಯಿಂದ ಹೆಲ್ತ್‌ ಬುಲೆಟಿನ್‌ ರಿಲೀಸ್

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಯನಗರದ ಅಪೋಲೋ  ಆಸ್ಪತ್ರೆ ಹೆಲ್ತ್‌ ಬುಲೆಟಿನ್‌ ರಿಲೀಸ್ ಮಾಡಿದೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಡರಾತ್ರಿ ಸುಸ್ತು ಮತ್ತು ವೀಕ್ನೆಸ್​​​ನಿಂದ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಇಂದು ಬೆಳಗ್ಗಿನ ಜಾವ 3.40ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಹೆಚ್‍ಡಿಕೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಡಾಕ್ಟರ್ ಪಿ ಸತೀಶ್ ಚಂದ್ರ ನೇತೃತ್ವದಲ್ಲಿ ಕುಮಾರಸ್ವಾಮಿ ಅವರಿಗೆ ಟ್ರೀಟ್ಮೆಂಟ್ ನೀಡಲಾಗುತ್ತಿದೆ. ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿ ಸದ್ಯ ಚೇತರಿಕೆ ಕಂಡಿದೆ ಎಂದು ಹೇಳಲಾಗಿದೆ.

ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಪತ್ನಿ ಅನಿತಾ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಭೇಟಿ  ನೀಡಿದರು.  ಎರಡು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಇದ್ದರು. ಮಂಗಳವಾರ ತಡರಾತ್ರಿ ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ.