ಹೂವಿನಹಡಗಲಿ: ಪೌರಕಾರ್ಮಿಕರಿಂದ ಪಟ್ಟಣ ಸ್ವಚ್ಛವಾಗಿದೆ. ನಾವು ಸಹ ಜವಾಬ್ದಾರಿ ನೆನಪಿನಲ್ಲಿಟ್ಟುಕೊಂಡು ನಮ್ಮ ಸುತ್ತಲ ಪ್ರದೇಶವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶೆ ಟಿ.ಅಕ್ಷತಾ ಹೇಳಿದರು.
ಪಟ್ಟಣದ ಕೋರ್ಟ್ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪುರಸಭೆ ಶನಿವಾರ ಆಯೋಜಿಸಿದ್ದ ಕಾನೂನು ಅರಿವು ಹಾಗೂ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾವೆಲ್ಲ ಆರೋಗ್ಯವಾಗಿರಲು ನಮ್ಮ ಸುತ್ತಲಿನ ವಾತಾವರಣ ಬಹುಮುಖ್ಯವಾಗಿದೆ. ಸರ್ಕಾರ ಸ್ವಚ್ಛತೆಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಜನರು ಅರಿಯಬೇಕು. ನಗರ ಹಾಗೂ ವಾಸವಿರುವ ಸ್ಥಳವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು. ಕಾನೂನು ಅರಿವು ಹೊಂದಬೇಕು. ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಿಕೊಳ್ಳಬಾರದು. ಸಾರ್ವಜನಿಕರು ಜವಾಬ್ದಾರಿಯಿಂದ ವರ್ತಿಸಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಜಿ.ವಸಂತ್‌ಕುಮಾರ, ಪುರಸಭೆ ಮಾಜಿ ಅಧ್ಯಕ್ಷ ಜ್ಯೋತಿಮಲ್ಲಣ್ಣ, ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಹೇಬ್, ಆರೋಗ್ಯ ನಿರೀಕ್ಷಕ ಮಾರುತಿ, ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶಿವಕುಮಾರ್, ವಕೀಲರಾದ ಅಂಜಿನಪ್ಪ, ಅಟವಾಳಗಿ ಕೊಟ್ರೇಶ್ ಇತರರಿದ್ದರು.