ಹೂವಿನಹಡಗಲಿ: ಪಟ್ಟಣದ ರಸ್ತೆಗಳಲ್ಲಿ ನಿರ್ಮಾಣವಾಗಿದ್ದ ಗುಂಡಿಗಳನ್ನು ಪಿಡಬ್ಲುೃಡಿ ಅಧಿಕಾರಿಗಳು ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಪಟ್ಟಣದ ಶಾಸ್ತ್ರೀ ವೃತ್ತ, ಹಳೇ ಬಸ್ ನಿಲ್ದಾಣದ ಸಮೀಪ, ಪುರಸಭೆ ಕಚೇರಿ ಮುಂಭಾಗ ಸೇರಿದಂತೆ ಬಹುತೇಕ ಭಾಗಗಳಲ್ಲಿ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದವು. ಇದರಿಂದ ವಾಹನ ಸವಾರರು ಹಾಗೂ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು.
ಈ ಕುರಿತು ವಿಜಯವಾಣಿ ಅ.17ರಂದು ‘ಹಡಗಲಿ ರಸ್ತೆಗಳಲ್ಲಿ ಗುಂಡಿಗಳ ದರ್ಶನ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ಪಿಡಬ್ಲುೃಡಿ ಅಧಿಕಾರಿಗಳು ಶುಕ್ರವಾರ ಪಟ್ಟಣದಲ್ಲಿನ ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಕೈಗೊಂಡಿದ್ದಾರೆ.
ಆದರೆ, ಕೆಲವೆಡೆ ಅರ್ಧ ಭಾಗ ಮುಚ್ಚಿ ಕೈಬಿಡಲಾಗುತ್ತಿದೆ ಎಂದು ಜನ ದೂರುತ್ತಿದ್ದು, ಅಧಿಕಾರಿಗಳು ಪೂರ್ಣವಾಗಿ ಮುಚ್ಚಲು ಕ್ರಮವಹಿಸಬೇಕೆಂದು ಒತ್ತಾಯಿಸಿದ್ದಾರೆ.