ಜಿಲ್ಲೆ

18ರಂದು ಹಡಪದ ಅಪ್ಪಣ ಜಯಂತಿ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮವನ್ನು ಜುಲೈ 18ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಸದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಎಚ್.ಎಂ. ಗಣೇಶ್‌ಪ್ರಸಾದ್, ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಡಾ.ಡಿ.ತಿಮ್ಮಯ್ಯ, ಮಧು ಜಿ. ಮಾದೇಗೌಡ, ಮರಿತಿಬ್ಬೇಗೌಡ, ಸಿ.ಎನ್.ಮಂಜೇಗೌಡ, ನಗರಸಭಾ ಸದಸ್ಯರಾದ ಎಚ್.ಎಸ್. ಮಮತಾ ಪಾಲ್ಗೊಳ್ಳುವರು. ಕೊಳ್ಳೇಗಾಲ ನಿವೃತ್ತ ಶಿಕ್ಷಕರಾದ ಶಿವಣ್ಣ ಇಂದುವಾಡಿ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.