ಕಾರಟಗಿ ತಹಸಿಲ್ ಕಚೇರಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ತಹಸೀಲ್ದಾರ್ ಎಂ.ಕುಮಾರಸ್ವಾಮಿ, ಸಮುದಾಯದ ಜಿಲ್ಲಾಧ್ಯಕ್ಷ ಶಿವಕುಮಾರ, ತಾಲೂಕಾಧ್ಯಕ್ಷ ವೀರೇಶ ದೇವರಮನಿ, ಪದಾಧಿಕಾರಿಗಳಾದ ಮಹಾಂತೇಶ ಬೆಣಕಲ್, ಶರಣಪ್ಪ , ರುದ್ರೇಶ ಇದ್ದರು. 
ಜಿಲ್ಲೆ

ಹಡಪದ ಅಪ್ಪಣ್ಣ ಜಯಂತಿ 10ಕ್ಕೆ

ಗಾಯತ್ರಿ ಮಾಲಿಪಾಟೀಲ್

ಕಾರಟಗಿ: ಇಲ್ಲಿನ ತಹಸಿಲ್ ಕಚೇರಿ ಆವರಣದಲ್ಲಿ ಜು.10ರಂದು ಶರಣ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಎಂ. ಕುಮಾರಸ್ವಾಮಿ ಹೇಳಿದರು. ಪಟ್ಟಣದ ತಹಸಿಲ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಹಡಪದ ಅಪ್ಪಣ್ಣ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರವಸಹಿಸಿದ್ದಾರೆ. ಅವರ ತತ್ವಾದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಮುದಾಯದ ಜಿಲ್ಲಾಧ್ಯಕ್ಷ ಶಿವಕುಮಾರ, ತಾಲೂಕಾಧ್ಯಕ್ಷ ವೀರೇಶ ದೇವರಮನಿ, ಪದಾಧಿಕಾರಿಗಳಾದ ಮಹಾಂತೇಶ ಬೆಣಕಲ್, ಶರಣಪ್ಪ, ರುದ್ರೇಶ, ರಾಮಾಂಜನೇಯ ಇತರರಿದ್ದರು.