ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಪೂರ್ವಸಿದ್ಧತಾ ಸಭೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಮತ್ತಿತರರಿದ್ದಾರೆ.  
ಜಿಲ್ಲೆ

ಹಡಪದ ಅಪ್ಪಣ್ಣ ಜನ್ಮ ದಿನ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ಹಡಪದ ಅಪ್ಪಣ್ಣ ಜಯಂತಿ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಜುಲೈ 21 ರಂದು ಬೆಳಗ್ಗೆ 9.30 ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತ ಮಾರ್ಗವಾಗಿ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ಕಂದಗಲ್ಲ ಹನುಮಂತರಾಯ ರಂಗಮಂದಿರದವರೆಗೆ ಹಡಪದ ಅಪ್ಪಣ್ಣ ಭಾವಚಿತ್ರ ಮೆರವಣಿಗೆ ಮಾಡಲಾಗುವುದು.

ಈ ವೇಳೆ ವಿವಿಧ ವಾದ್ಯಮೇಳಗಳ ಪಾಲ್ಗೊಳ್ಳಲಿವೆ. ಬೆಳಗ್ಗೆ 11 ಕ್ಕೆ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸೋಮಲಿಂಗ ಗೆಣ್ಣೂರ ವಿವರಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಮತ್ತಿತರರಿದ್ದರು.