ಹಗರಿಬೊಮ್ಮನಹಳ್ಳಿಯಲ್ಲಿ ಬಿಜೆಪಿ ಮಂಡಲ ಘಟಕದಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ತಾಲೂಕು ಅಧ್ಯಕ್ಷ ಬೆಣಕಲ್ ಪ್ರಕಾಶ್, ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬುಡ್ಡಿ ಬಸವರಾಜ, ಬಲ್ಲಾಹುಣಸಿ ರಾಮಣ್ಣ, ಜಿ.ಪಂ.ಮಾಜಿ ಸದಸ್ಯ ಮಲ್ಲಿಕಾರ್ಜುನ್ ನಾಯ್ಕ ಇತರರಿದ್ದರು. 
ಜಿಲ್ಲೆ

ಜನರ ನೆಮ್ಮದಿ ಕಸಿದ ಕಾಂಗ್ರೆಸ್ ಆಡಳಿತ

ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಹಾಗೂ ಕಾಂಗ್ರೆಸ್ ಸರ್ಕಾರದ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ತಾಲೂಕು ಘಟಕದಿಂದ ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ವಾಲ್ಮೀಕಿ ವೃತ್ತದವರೆಗೆ ಸಾಗಿತು. ಬಿಜೆಪಿ ತಾಲೂಕು ಅಧ್ಯಕ್ಷ ಬೆಣಕಲ್ ಪ್ರಕಾಶ ಮಾತನಾಡಿ, ರಾಜ್ಯದ ಜನತೆಗೆ ಭರವಸೆಗಳನ್ನು ನೀಡಿದ ಕಾಂಗ್ರೆಸ್ ಬೆಲೆ ಏರಿಕೆಯ ಬರೆ ಎಳೆಯುತ್ತಿದೆ. ನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಜನರ ನೆಮ್ಮದಿ ಕಸಿದು ದುಬಾರಿ ದುನಿಯಾ ಮಾಡಿದೆ. ಕೂಡಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿ, ಎಸ್ಸಿ-ಎಸ್ಟಿ ಅಭಿವೃದ್ಧಿ ಯೋಜನೆ ಹಣ ದುರ್ಬಳಕೆಯಾಗಿದ್ದರೂ, ಆ ಸಮುದಾಯಗಳು ಕೈಕಟ್ಟಿ ಕುಳಿತಿವೆ ಎಂದುಕೊಂಡಿರುವ ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದರು.

ಪ್ರಮುಖ ಬಲ್ಲಾಹುಣಸಿ ರಾಮಣ್ಣ, ಜಿ.ಪಂ.ಮಾಜಿ ಸದಸ್ಯ ಮಲ್ಲಿಕಾರ್ಜುನ್ ನಾಯ್ಕ, ಎಸ್ಸಿ ಮೋರ್ಚಾ ಮಂಡಲ ಅಧ್ಯಕ್ಷ ಮರಿಯಪ್ಪ, ಮಂಡಲ ಮಾಜಿ ಅಧ್ಯಕ್ಷ ವೀರೇಶ್ವರ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೋಗಳಿ ಹನುಮಂತಪ್ಪ, ಪ್ರಮುಖರಾದ ಶಾಂತಮ್ಮ, ಕೃಷ್ಣನಾಯ್ಕ, ಬ್ಯಾಟಿ ಸಂದೀಪ, ಟಿ.ಮಹೇಂದ್ರ, ಹನುಮಂತಪ್ಪ, ಭರಮನಗೌಡ, ಒಬಿಸಿ ಮೋರ್ಚಾದ ಕರಿಬಸಪ್ಪ, ಯುವ ಮೋರ್ಚಾ ಮಂಡಲ ಅಧ್ಯಕ್ಷ ದಿವಾಕರ್ ಗೌಡ, ಸಂಘಟನಾ ಕಾರ್ಯದರ್ಶಿ ಬಸವನಗೌಡ, ಇಟ್ಟಿಗಿ, ಗುರುಬಸವರಾಜ, ಯುವರಾಜ ಗಡ್ಡಿ ಇತರರಿದ್ದರು.