ತಂಬ್ರಹಳ್ಳಿಯಲ್ಲಿ ಶುಕ್ರವಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ ಏಣಿಗಿ, ಮುಖ್ಯಶಿಕ್ಷಕಿ ಕೌಸಲ್ಯಾ, ಗ್ರಾಪಂ ಸದಸ್ಯರಾದ ಮೆಹಬೂಬ್ ಬಾಷಾ, ಬಸಮ್ಮ, ಮುಖ್ಯಶಿಕ್ಷಕ ಲೋಕೇಶ್ ಇತರರಿದ್ದರು. 
ಜಿಲ್ಲೆ

ಮಕ್ಕಳ ಪ್ರತಿಭೆಗೆ ಸಿಗಲಿ ಪ್ರೋತ್ಸಾಹ

ಶಾಮಸುಂದರ್ ಕೊಪ್ಪಳಕರ್

ಹಗರಿಬೊಮ್ಮನಹಳ್ಳಿ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದು ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್ ಹೇಳಿದರು.

ತಂಬ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಪ್ರತಿಭೆ ಒರೆಗೆ ಹಚ್ಚುವ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬೇಡಿ. ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಮೂಲಕ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಗ್ರಾಮ ಮತ್ತು ಶಾಲೆಗೂ ಕೀರ್ತಿ ತರುವಂತೆ ಮಾಡಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ ಏಣಿಗಿ ಮಾತನಾಡಿದರು. ಮುಖ್ಯಶಿಕ್ಷಕಿ ಕೌಸಲ್ಯಾ, ಗ್ರಾಮ ಪಂಚಾಯಿತಿ ಸದಸ್ಯರಾದ ಮೆಹಬೂಬ್ ಬಾಷಾ, ಬಸಮ್ಮ, ಪ್ರೌಢಶಾಲೆ ಮುಖ್ಯಶಿಕ್ಷಕ ಲೋಕೇಶ್, ಶಿಕ್ಷಕರಾದ ಪ್ರಭು, ಯಂಕಾರೆಡ್ಡಿ, ರೆಡ್ಡಿನಾಯ್ಕ, ಸಿಆರ್‌ಪಿ ಕನಕಪ್ಪ ಇತರರಿದ್ದರು.