ಹಗರಿಬೊಮ್ಮನಹಳ್ಳಿ: ಪಟ್ಟಣದ ರಾಮನಗರದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ 68ನೇ ವರ್ಷದ ರಥೋತ್ಸವ ವಿಜೃಂಭಣೆಯಿಂದ ಸೋಮವಾರ ಜರುಗಿತು.
ದೇಗುಲದಲ್ಲಿ ವಿಶೇಷ ಅಭಿಷೇಕ, ಪೂಜೆ, ಮಂಗಳಾರತಿ ನಡೆದವು. ಮಧ್ಯಾಹ್ನ ಮಡಿತೇರು ಉತ್ಸವ ನಡೆಯಿತು. ಸಂಜೆ ಶ್ರೀ ವೆಂಕಟೇಶ್ವರ ಸ್ವಾಮಿಯ ವೈಭವದ ರಥೋತ್ಸವ ಸಕಲ ವಾದ್ಯ ಮೇಳಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಶಾಸಕ ಕೆ.ನೇಮಿರಾಜ್ ನಾಯ್ಕ ರಥ ಎಳೆದರು. ರಥವನ್ನು ಪಾದಗಟ್ಟೆಯವರೆಗೆ ಎಳೆದು ಬಳಿಕ ಮೂಲಸ್ಥಳಕ್ಕೆ ತರಲಾಯಿತು. ಭಕ್ತರು ಹೂ-ಬಾಳೆಹಣ್ಣು ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು.