ಬಳ್ಳಾರಿಯಲ್ಲಿ ವಿವಿ ಸಂಘದ ಅಧ್ಯಕ್ಷ ಡಾ.ಕಣೇಕಲ್ ಮಹಾಂತೇಶಗೆ ಒತ್ತಾಯಿಸಿ ವೀರಶೈವ ಸಮುದಾಯದ ಮುಖಂಡರು ಮನವಿ ಸಲ್ಲಿಸಿದರು. ಮಾಜಿ ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ, ಗ್ರಾಪಂ ಸದಸ್ಯ ಮೈಲಾರ ಶಿವಕುಮಾರ, ತಾಪಂ ಮಾಜಿ ಸದಸ್ಯ ಪಿ.ಕೊಟ್ರೇಶ, ಪಿಕಾರ್ಡ್ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಪಟ್ಟಣ ಶೆಟ್ಟಿ ಸುರೇಶ, ನಿವೃತ್ತ ಪಿಡಿಒ ಡಿ.ಎಂ.ತೋಟಯ್ಯ, ಗಂಗಾಧರ, ಗಡ್ಡಿ ನಿಂಗಪ್ಪ ಇತರರಿದ್ದರು. 
ಜಿಲ್ಲೆ

ಪಿಯುಸಿ ವಿಜ್ಞಾನ ವಿಭಾಗ ತೆರೆಯಿರಿ

ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿಯಲ್ಲಿ ವೀರಶೈವ ವಿದ್ಯಾವರ್ಧಕ ಸಂಘದಿಂದ ಶೈಕ್ಷಣಿಕ ವರ್ಷದಿಂದ ಪಿಯುಸಿಯಲ್ಲಿ ವಿಜ್ಞಾನ ವಿಭಾಗ ಹಾಗೂ ಶಾಲೆಯಲ್ಲಿ ಕಿಂಡರ್ ಗಾರ್ಡನ್ ತೆರೆಯಲು ಒತ್ತಾಯಿಸಿ ವೀರಶೈವ ಸಮುದಾಯದ ಮುಖಂಡರು ಬಳ್ಳಾರಿಯಲ್ಲಿ ಸಂಘದ ಅಧ್ಯಕ್ಷ ಡಾ.ಕಣೇಕಲ್ ಮಹಾಂತೇಶಗೆ ಇತ್ತೀಚೆಗೆ ಮನವಿ ಸಲ್ಲಿಸಿದರು.

ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ ಮಾತನಾಡಿ, ತಂಬ್ರಹಳ್ಳಿ ಹೋಬಳಿ ವ್ಯಾಪ್ತಿಯ ಸುತ್ತಲಿನ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಬಳಿಕ ದೂರದ ನಗರಗಳಿಗೆ ಹೋಗಿ ಶಿಕ್ಷಣ ಪಡೆಯಲು ಅಸಾಧ್ಯ. ಕಾರಣ ಅವರ ಅನುಕೂಲಕ್ಕಾಗಿ ವೀರಶೈವ ವಿದ್ಯಾವರ್ಧಕ ಸಂಘದಿಂದ ವಿಜ್ಞಾನ ವಿಭಾಗ ತೆರೆದರೆ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಅಲ್ಲದೆ ಶಾಲೆಯಲ್ಲಿ ಕಿಂಡರ್ ಗಾರ್ಡನ್ ತೆರೆಯಬೇಕು ಎಂದು ಒತ್ತಾಯಿಸಿದರು.