ಜಿಲ್ಲೆ

ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ- ಕೈ-ಕಮಲ ಬೆಂಬಲಿಗರ ಘರ್ಷಣೆ

vijayavanibly

ಹಗರಿಬೊಮ್ಮನಹಳ್ಳಿ (ಬಳ್ಳಾರಿ): ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ, ತಳ್ಳಾಟ ನಡೆಯಿತು. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಟ್ಟರು.

ಪೊಲೀಸರು ಹಾಗೂ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಬಿಜೆಪಿಯವರಿಗೆ ಚುನಾವಣಾ ಕೇಂದ್ರದೊಳಗೆ ಹೋಗಲು ಮುಕ್ತ ಅವಕಾಶ ನೀಡುತ್ತಿರುವ ಪೊಲೀಸರು ಕಾಂಗ್ರೆಸ್ ನವರಿಗೆ ತಡೆಯೊಡ್ಡುತ್ತಿದ್ದಾರೆ. ನಮ್ಮನ್ನು ಮುಕ್ತವಾಗಿ ಬಿಡಿ ಬಿಜೆಪಿಯವರನ್ನು ನೋಡಿಕೊಳ್ಳುತ್ತೇವೆ ಎಂದು ಶಾಸಕ ಭೀಮಾನಾಯ್ಕ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಶಾಸಕ ಭೀಮಾನಾಯ್ಕ ಸಿಪಿಐ ಮಲ್ಲಿಕಾರ್ಜುನ ಜತೆ ವಾಗ್ವಾದ ನಡೆಸಿದರು.

ಕಾಂಗ್ರೆಸ್ ಶಾಸಕ ಭೀಮಾನಾಯ್ಕ ಹಾಗೂ ಬಿಜೆಪಿಯ ಮಾಜಿ ಶಾಸಕ ನೇಮಿರಾಜ ನಾಯ್ಕ ನಡುವೆ ರಾಜಕೀಯ ಬಲಪ್ರದರ್ಶನಕ್ಕೆ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ವೇದಿಕೆಯಾಗಿದೆ.