ಜಿಲ್ಲೆ

ಅಕ್ಷರ ಸಂತ ಹಾಜಬ್ಬರಿಗೆ ಜಿಲ್ಲಾಡಳಿತದಿಂದ ಸನ್ಮಾನ

reportermng

ಮಂಗಳೂರು: ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಮಂಗಳವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿದ
ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.
ಸಾಮಾನ್ಯ ವ್ಯಕ್ತಿಯಾಗಿರುವ ನನ್ನನ್ನು ದೇಶದ ಪ್ರಧಾನಿ, ರಾಷ್ಟಪತಿ ಅವರು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿರುವುದು ಸಂತೋಷ ನೀಡಿದೆ ಎಂದರು.