ಮುದಗಲ್‌ನಲ್ಲಿ ಹಾಲಭಾವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನೂರಾರು ಮಹಿಳೆಯರು ಕುಂಭ ಹೊತ್ತು ಮಂಗಳವಾರ ಮೆರವಣಿಗೆ ಮಾಡಿದರು. 
ಜಿಲ್ಲೆ

ಹಾಲಬಾವಿ ವೀರಭದ್ರೇಶ್ವರ ಜಾತ್ರೆ ಸಂಪನ್ನ

​ಮುದಗಲ್: ಪಟ್ಟಣದ ಹೊರವಲಯದ ಹಾಲಭಾವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಮಂಗಳವಾರ ಸಂಭ್ರಮದಿಂದ ಜರುಗಿತು. ಬೆಳಗಿನ ಜಾವ ವೀರಭದ್ರೇಶ್ವರ ಮೂರ್ತಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಯಿತು. ನಂತರ ಜಾತ್ರೆ ಅಂಗವಾಗಿ ಕುಂಬಾರ ಪೇಟೆಯ ಬಸವೇಶ್ವರ ದೇವಸ್ಥಾನದಿಂದ ನೂರಾರು ಮಹಿಳೆಯರು ಕುಂಭಗಳ ಹೊತ್ತು ಕಲಾ ತಂಡಗಳ ಜೊತೆಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ದೇವಸ್ಥಾನದವರೆಗೆ ಮೆರವಣಿಗೆ ಮಾಡಿದರು.

ವೀರಭದ್ರೇಶ್ವರ ಮೂರ್ತಿಗೆ ರುದ್ರಾಭಿಷೇಕ

ಪುರವಂತಿಕೆ ಪ್ರದರ್ಶನ ನೋಡುಗರ ಕಣ್ಮನ ಸೆಳೆಯಿತು. ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅಗ್ನಿಪ್ರವೇಶ, ಕುಂಬಾಭಿಷೇಕ, ದೇವಸ್ಥಾನಕ್ಕೆ ಕಳಸಾರೋಹಣ ಹಾಗೂ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಸಂಜೆ ದೇವಸ್ಥಾನದ ಅರ್ಚಕ ಸಿದ್ದಯ್ಯಸ್ವಾಮಿ ಸಾಲಮಠ ನೇತೃತ್ವದಲ್ಲಿ ಉಚ್ಛಾಯ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.