ಜಿಲ್ಲೆ

ಅರ್ಧ ತಾಸು ರಭಸದ ವರ್ಷಧಾರೆ

ರವಿ ಎಸ್. ಬಳೂಟಗಿ

ಗಜೇಂದ್ರಗಡ: ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಶುಕ್ರವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ 4 ಗಂಟೆಗೆ ಆರಂಭವಾದ ಮಳೆ ಅರ್ಧ ಗಂಟೆ ಸುರಿಯಿತು. ನಂತರ ರಾತ್ರಿ ಜಿಟಿಜಿಟಿ ಮಳೆ ಮುಂದುವರಿಯಿತು. ಗುರುವಾರ ಉತ್ತಮ ಮಳೆ ಸುರಿದಿದೆ. ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ ಅಧಿಕ ರಭಸವಾಗಿ ಸುರಿಯಿತು. ಮಳೆಯಿಂದ ಹಿಂಗಾರು ಬಿತ್ತನೆಗೆ ಹಿನ್ನಡೆಯಾಗಿದೆ. ಈಗಾಗಲೇ ಬಿತ್ತನೆ ಮಾಡಿರುವ ರೈತರು ಮಳೆ ಬಿಡುವು ನೀಡಬೇಕು ಎನ್ನುತ್ತಿದ್ದಾರೆ.