ಕಾರವಾರ: ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಸೆ.10 ರಿಂದ 12 ರವರೆಗೆ ನಡೆದ ಪಂದ್ಯಾವಳಿಯಲ್ಲಿ ಹಳಿಯಾಳ ವಿದ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.
ಇದನ್ನೂ ಓದಿ:ಪೌರ ಕಾರ್ಮಿಕರ ಮೇಲೆ ಹಲ್ಲೆ- ಇಬ್ಬರ ವಿರುದ್ಧ ದೂರು
ಹಳಿಯಾ ಳ ಕ್ರೀಡಾ ವಸತಿ ನಿಲಯದ ಮತ್ತು ಕುಸ್ತಿ ಅಖಾಡದಲ್ಲಿ ತರಬೇತಿಯನ್ನು ಪಡೆಯುತ್ತಿರುವ ಕುಸ್ತಿ ಪಟುಗಳು ಒಟ್ಟಾರೆ 12ಚಿನ್ನ ,3 ಬೆಳ್ಳಿ ,10 ಕಂಚು ಒಟ್ಟು 25 ಪದಕ ಪ್ರಶಸ್ತಿ ಯೊಂದಿಗೆ ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದು ಕೊಂಡಿದ್ದಾರೆ ಎಂದು ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಅಜ್ಜಪ್ಪ ಸೊಗಲದ ತಿಳಿಸಿದ್ದಾರೆ.