ಜಿಲ್ಲೆ

ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ

ಸುನಿಲ್ ಪೊನ್ನೇಟಿ

ಮಡಿಕೇರಿ:

ಕನ್ನಡದ ಪ್ರಥಮ ಶಾಸಕ ಹೆಗ್ಗಳಿಕೆಯ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಶುಕ್ರವಾರ ಮಡಿಕೇರಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಅನಾವರಣ ಮಾಡಲಾಯಿತು.

ಕರ್ನಾಟಕ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ ಮಾಡಲಾಗುತ್ತಿದ್ದು, ಮಡಿಕೇರಿಯಲ್ಲೂ ಇದನ್ನು ಜಾರಿ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಬೇಬಿ ಮ್ಯಾಥ್ಯು ಮತ್ತಿತರರು ಇದ್ದರು.