ಹೊಸಪೇಟೆ: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಫೆ.೨೮, ಮಾ.೦೧ ಹಾಗೂ ೧೨ ರಂದು ನಡೆಯುವ ಹಂಪಿ ಉತ್ಸವದ ಸಿದ್ಧತೆಯ ಕಾರ್ಯ ಶುರುವಾಗಿದ್ದು, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ನೇತೃತ್ವದಲ್ಲಿ ಗುರುವಾರ ಸ್ಥಳ ಪರಿಶೀಲನೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಜಿಲ್ಲೆಯ ಎಲ್ಲ ಶಾಸಕರ ಸಮ್ಮುಖದಲ್ಲಿ ಇತ್ತೀಚೆಗೆ ನಗರದಲ್ಲಿ ಜರುಗಿದ ತ್ರೆöÊಮಾಸಿಕ ಸಭೆಯಲ್ಲಿ ಉತ್ಸವದ ಲೋಗೋ ಕೂಡ ಬಿಡುಗಡೆ ಮಾಡಗಿದೆ. ನಂತರದಲ್ಲಿ ಉತ್ಸವದ ಸಿದ್ದತೆ ಭರದಿಂದ ಸಾಗಿದೆ. ಹಂಪಿಯ ಉಗ್ರನರಸಿಂಹ, ಗಾತ್ರಿಪೀಠ, ಮತಂಗಿ ಗುಡ್ಡದ ಪ್ರದೇಶ ಸೇರಿದಂತೆ ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ಮಾಡಿದರು. ಹಂಪಿಯಲ್ಲಾಗಬೇಕಾದ ಪೂರಕ ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಶುಕ್ರವಾರ ಉತ್ಸವ ಜರುಗುವ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ ಬಾರಿಯಂತೆ ಈ ಬಾರಿ ಕೂಡ ನಾಲ್ಕು ವೇದಿಕೆಗಳನ್ನು ನಿರ್ಮಿಸುವ ಸಾಧ್ಯತೆಯಿವೆ. ವಿಜಯನಗರ ವೈಭವವನ್ನು ಪ್ರತಿಬಿಂಬಿಸುವ ವಸಂತ ವೈಭವ, ತುಂಗಾ ಆರತಿ, ಹಂಪಿ ಬೈ ನೈಟ್, ಹಂಪಿ ಬೈಸ್ಕೆöÊ ಸೇರಿದಂತೆ ಕುಸ್ತಿ ಸ್ಪರ್ಧೆ, ಮೆಹಂದಿ, ರಂಗೊಲಿ ಸ್ಪರ್ಧೆ, ಕರಕುಶಲ ವಸ್ತುಗಳ ಪ್ರದರ್ಶನ, ದೇಸಿ ಆಹಾರ, ಫಲಪುಷ್ಪ ಪ್ರದರ್ಶನ, ಶಿಲ್ಪಕಲಾ ಶಿಬಿರ, ಚಿತ್ರಕಲಾ ಶಿಬಿರ, ಫೋಟೋ ಸ್ಪರ್ಧೆ, ಮಹಿಳೆಯರಿಗೆ ಸಂಬAಧಿಸಿದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಅಗತ್ಯ ವಿವರ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.