ಜಿಲ್ಲೆ

ಚಕ್ಕಡಿಯಿಂದ ಬಿದ್ದು ಯುವತಿ ಯುವತಿ ಮೃತ

ಹಾನಗಲ್ಲ: ಎತ್ತಿಕ ಚಕ್ಕಡಿ ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ ಘಟನೆ ತಾಲೂಕಿನ ಜಕ್ಕನಾಯಕನಕೊಪ್ಪ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ತಾಲೂಕಿನ ಆಡೂರ ಗ್ರಾಮದ ಅಂಜಲಿ ಗುಡ್ಡಪ್ಪ ಕಡೇರ (19) ಮೃತ ಯುವತಿ.
ಇವರು ಜಮೀನಿನಲ್ಲಿ ಹಸಿಮೆಣಸಿನಕಾಯಿ ಹರಿಯುವ ಸಲುವಾಗಿ ಎತ್ತಿನ ಚಕ್ಕಡಿಯಲ್ಲಿ ಹೋಗಿ ವಾಪಸ್ ಬರುತ್ತಿದ್ದ ಸಮಯದಲ್ಲಿ ಚಕ್ಕಡಿ ಪಲ್ಟಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅಂಜಲಿಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.