ಜಿಲ್ಲೆ

ಕೈ ಹಿಡಿದ ಗ್ಯಾರಂಟಿ ಯೋಜನೆಗಳು

ರಾಘವೇಂದ್ರಗೌಡ ಭೀ ಪಾಟೀಲ್

ಅಥಣಿ: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರು ಒಪ್ಪಿಕೊಂಡಿದ್ದಾರೆ.

ಸುಳ್ಳು ಆರೋಪಗಳಿಗೆ ಕಿವಿಗೊಡದೆ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ವಿರೋಧ ಪಕ್ಷಗಳಿಗೆ ಜನರು ಉತ್ತರ ನೀಡಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳು ಕೈ ಹಿಡಿದು ಗೆಲುವಿನ ದಡ ತಲುಪಿಸಿವೆ. ಕಾಂಗ್ರೆಸ್ ಸರ್ಕಾರದ ಮೇಲೆ ಜನರ ನಂಬಿಕೆ, ವಿಶ್ವಾಸವಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಜಾರ್ಖಂಡದಲ್ಲಿ ಜೆಎಂಎಂ ಗೆಲವು ಸಾಧಿಸಿದೆ. ರಾಜ್ಯದ ಅಭಿವೃದ್ಧಿಗೆ ಸರ್ಕಾರ ಸುಭದ್ರವಾಗಿದೆ ಎಂದರು.