ಜಿಲ್ಲೆ

ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆ ಹಸ್ತಾಂತರ

ಇಂದಿರಾ ಎನ್ ಕೆ

ಹೆಬ್ರಿ: ಮುದ್ರಾಡಿ ತುಂಡುಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ, ಸ್ಪೋಕನ್ ಇಂಗ್ಲಿಷ್ ತರಗತಿಗಳ ಉದ್ಘಾಟನೆ, ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆ ಹಸ್ತಾಂತರ, ಚಿಣ್ಣರ ನಿಧಿ ಯೋಜನೆಗೆ ಮುದ್ರಾಡಿ ಗ್ರಾಪಂ ಅಧ್ಯಕ್ಷೆ ವಸಂತಿ ಪೂಜಾರಿ ಚಾಲನೆ ನೀಡಿದರು.

ಮಕ್ಕಳಿಗೆ ನೋಟ್ ಪುಸ್ತಕ, ಕಲಿಕೋಪಕರಣ, ಕುರ್ಚಿ, ಕೊಡೆ, ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು. ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ, ಸ್ಪೋಕನ್ ಇಂಗ್ಲಿಷ್ ಶಿಕ್ಷಕಿ ಚಿತ್ರಾ, ಎಸ್‌ಡಿಎಂಸಿ ಗೌರವಾಧ್ಯಕ್ಷ ಮಧುಸೂದನ್ ಭಟ್, ಎಸ್‌ಡಿಎಂಸಿ ಅಧ್ಯಕ್ಷ ಶಂಕರ್ ಕುಲಾಲ್, ಉಪಾಧ್ಯಕ್ಷೆ ಅಖಿಲಾ ಶೆಟ್ಟಿ, ಮುದ್ರಾಡಿ ಗ್ರಾಪಂ ಸದಸ್ಯರಾದ ಮಂಜುನಾಥ ಹೆಗ್ಡೆ, ಗಣಪತಿ ಎಂ., ಪ್ರಮುಖರಾದ ಸುಧಾಕರ್ ಪೂಜಾರಿ, ಶೋಧನ್ ಶೆಟ್ಟಿ, ಸುಬ್ರಹ್ಮಣ್ಯ, ಧನಂಜಯ್, ಸೂರಜ್ ಶೆಟ್ಟಿ, ಸುರೇಶ್ ಪೂಜಾರಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಚಿತ್ರಾ ಸ್ವಾಗತಿಸಿದರು. ಶಿಕ್ಷಕಿ ಬಾಬಿ ವಂದಿಸಿದರು. ಶಿಕ್ಷಕಿ ಪ್ರಮಿತಾ ನಿರೂಪಿಸಿದರು.