ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್‌ಗಳನ್ನು ಮಾಲೀಕರಿಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ಹಸ್ತಾಂತರಿಸಿದರು. 
ಜಿಲ್ಲೆ

12 ಮೊಬೈಲ್ ಫೋನ್‌ಗಳ ಹಸ್ತಾಂತರ

ಗಂಗೊಳ್ಳಿ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏ.1ರಿಂದ ಜೂನ್ 10ರವರೆಗೆ ಸಾರ್ವಜನಿಕರು ಕಳೆದುಕೊಂಡಿರುವ 12 ಮೊಬೈಲ್ ಫೋನ್‌ಗಳನ್ನು ಸಿಇಐಆರ್ ಪೋರ್ಟ್‌ಲ್ ಮೂಲಕ ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ಕುಂದಾಪುರ ಪೊಲೀಸರು, ಸದ್ರಿ ಮೊಬೈಲ್ ಫೋನ್‌ಗಳನ್ನು ಮಾಲೀಕರಿಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ಹಸ್ತಾಂತರಿಸಿದರು.

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈವರೆಗೆ 65 ಮೊಬೈಲ್‌ಗಳನ್ನು ಸಿಇಐಆರ್ ತಂತ್ರಾಂಶದ ಮೂಲಕ ಪತ್ತೆಹಚ್ಚಿ ಅದರ ಮಾಲೀಕರಿಗೆ ಈಗಾಗಲೇ ನೀಡಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ.ಮಾರ್ಗದರ್ಶನ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ ಹಾಗೂ ಪರಮೇಶ್ವರ ಹೆಗಡೆ ಮತ್ತು ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ನಿರ್ದೇಶನದಂತೆ ಕುಂದಾಪುರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಯು.ಬಿ.ನಂದಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕುಂದಾಪುರ ಪೊಲೀಸ್ ಠಾಣೆ ಉಪನಿರೀಕ್ಷಕ ವಿನಯ್ ಎಂ.ಕೊರ್ಲಹಳ್ಳಿ, ಪ್ರಸಾದ್ ಕುಮಾರ್ ಕೆ.ಹಾಗೂ ಸಿಬ್ಬಂದಿ ಸಿದ್ದಪ್ಪ ಸಕನಳ್ಳಿ, ಮಾರುತಿ ನಾಯ್ಕ, ತಾಂತ್ರಿಕ ಸಿಬ್ಬಂದಿ ಅಶ್ವಿನ್ ಕುಮಾರ್ ಭಾಗವಹಿಸಿದ್ದರು. ಕಳೆದುಕೊಂಡಿದ್ದ ಮೊಬೈಲ್‌ಗಳನ್ನು ಹಾವೇರಿ, ಗದಗ, ಮಂಗಳೂರು, ದಾವಣಗೆರೆ, ಕಾರವಾರ ಹಾಗೂ ಮತ್ತಿತರ ಕಡೆಗಳಿಂದ ವಶಪಡಿಸಿಕೊಳ್ಳಲಾಗಿದೆ.

ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್‌ಗಳನ್ನು ಮಾಲೀಕರಿಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ಹಸ್ತಾಂತರಿಸಿದರು.