ಕಾರ್ಕಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗ ಕಾಪು ತಾಲೂಕು ಹಾಗೂ ಶಿರ್ವದ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಸಹಕಾರದಲ್ಲಿ ಹಿಂದು ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗೆ ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿ ಮೌಲ್ಯದ ಡೆಸ್ಕ್ ಮತ್ತು ಬೆಂಚುಗಳನ್ನು ಸೋಮವಾರ ಹಸ್ತಾಂತರಿಸಲಾಯಿತು.
ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ ಭಾಸ್ಕರ ಶೆಟ್ಟಿ ಕೊಡುಗೆ ಸ್ವೀಕರಿಸಿ ಮಾತನಾಡಿದರು. ಕಾಪು ತಾಲೂಕಿನ ಯೋಜನಾಧಿಕಾರಿ ಮಮತಾ ಶೆಟ್ಟಿ ಪ್ರಸ್ತಾವನೆಗೈದು ತಾಲೂಕಿನ ವಿವಿಧ ಶಾಲೆಗಳಿಗೆ 11.39 ಲಕ್ಷ ರೂ. ಮೌಲ್ಯದ 134 ಜತೆ ಬೆಂಚು ಮತ್ತು ಡೆಸ್ಕ್‌ಗಳನ್ನು ವಿತರಿಸಲಾಗಿದೆ ಎಂದರು.
ಉಸಿರಿಗಾಗಿ ಹಸಿರು ಸಂಘಟಕ ಸಂತೋಷ್ ಕುಮಾರ್ ಶೆಟ್ಟಿಗಾರ್, ಪ್ರಮುಖರಾದ ರಾಘವೇಂದ್ರ ಶೆಟ್ಟಿ, ವಿಮಲಾ ಹಸ್ಲರ್, ಗೀತಾ, ಭಾಸ್ಕರ ಎ, ಅಧ್ಯಾಪಕ ಅಧ್ಯಾಪಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ವಸಂತಿ ಸ್ವಾಗತಿಸಿ, ಶಿಕ್ಷಕ ಸುರೇಂದ್ರನಾಥ ಶೆಟ್ಟಿ ವಂದಿಸಿದರು. ಶಿಕ್ಷಕಿ ಸುಪ್ರೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.