ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ನೇತೃತ್ವದಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಸ್ವರ್ಣ ಜುವೆಲರ್ಸ್‌ನ ಪ್ರಬಂಧಕ ಲಕ್ಷ್ಮೀನಾರಾಯಣ್ ಮತ್ತು ಸುನೀಲ್ ಜಿ. ಅವರಿಗೆ ಗುರುವಾರ ಹಸ್ತಾಂತರಿಸಲಾಯಿತು.
ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಧವ ಆರ್.ಪಾಲನ್, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಚಂದ್ರಶೇಖರ್ ಅಮೀನ್, ಪ್ರಚಾರ ಸಮಿತಿ ಸಂಚಾಲಕ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕ ಜಯರಾಮ್ ಆಚಾರ್ಯ, ಶೈಲಪುತ್ರಿ ತಂಡದ ಸಂಚಾಲಕ ರಾಧಾರಮಣ ಶಾಸ್ತ್ರೀ, ನವದುರ್ಗಾ ಲೇಖನ ಯಜ್ಞ ಸಮಿತಿ ಸಂಚಾಲಕ ದಾಮೋದರ ಶರ್ಮ, ದೇವಳ ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ಭಕ್ತರಿಂದ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಅ.3ರಂದು ಮುಹೂರ್ತ ನೆರವೇರಿಸಲಾಗಿತ್ತು. ಸಮಿತಿಯ ನಿರೀಕ್ಷೆಯಂತೆ ಭಕ್ತರು ಈಗಲೂ ಚಿನ್ನ ಮತ್ತು ಬೆಳ್ಳಿ ನೀಡುತ್ತಿದ್ದು, ಅ.29ರವರೆಗೆ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಅವಕಾಶವಿದೆ. 20 ಕೆಜಿ ಚಿನ್ನ, 180 ಕೆಜಿ ಬೆಳ್ಳಿಯೊಂದಿಗೆ ನಿರ್ಮಾಣಗೊಳ್ಳುವ ಸ್ವರ್ಣ ಗದ್ದುಗೆಗೆ ಭಕ್ತರಿಂದ ಈಗಾಗಲೇ 11 ಕೆ.ಜಿ ಚಿನ್ನ, 36 ಕೆಜಿ ಬೆಳ್ಳಿ ಸಮರ್ಪಣೆಯಾಗಿದೆ ಎಂದು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ರವಿಸುಂದರ್ ಶೆಟ್ಟಿ ಮುಂಬೈ ತಿಳಿಸಿದ್ದಾರೆ.