ಜಿಲ್ಲೆ

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Haveri - Kariyappa Aralikatti

ಹಾನಗಲ್ಲ: ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಲಗಿನಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗೀತಾ ಗದಿಗೆಪ್ಪಗೌಡ್ರ ಪಾಟೀಲ (48) ಮೃತ ಮಹಿಳೆ.

ಇವರು ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.