ಮೈಸೂರು: ಮೈಸೂರು ಹನುಮಂತೋತ್ಸವ ಸಮಿತಿ ವತಿಯಿಂದ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಮೈಸೂರು ಹನುಮ ಹಬ್ಬ’ ಪ್ರಯುಕ್ತ ಹಮ್ಮಿಕೊಂಡಿದ್ದ ಮೆರವಣಿಗೆ ಪ್ರತಿಯೊಬ್ಬರ ಕಣ್ಮನ ಸೆಳೆಯಿತು.
ಮೆರವಣಿಗೆಯಲ್ಲಿ ಹನುಮ, ಶ್ರೀರಾಮನ ಮೂರ್ತಿಗಳು ಗಮನ ಸೆಳೆಯಿತು. ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮ ಮಂದಿರದ ಸ್ತಬ್ಧಚಿತ್ರ ಮೆರವಣಿಗೆಗೆ ಮೆರಗು ನೀಡಿತು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಮೆರವಣಿಗೆಗೆ ಚಾಲನೆ ದೊರೆಯಿತು. ಶಾಸಕ ಹರೀಶ್ ಗೌಡ, ಜಿ.ಟಿ. ದೇವೇಗೌಡ, ಟಿ.ಎಸ್. ಶ್ರೀವತ್ಸ, ಸಮಿತಿ ಸದಸ್ಯರಾದ ಸಂಜಯ್, ಜೀವನ್, ಕುಮಾರ್, ಅಭಿಲಾಷ್ ಹಾಗೂ ಇತರರು ಪಾಲ್ಗೊಂಡಿದ್ದರು.
ಮೆರವಣಿಗೆಯು ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಿಂದ ಪ್ರಾರಂಭಗೊಂಡು ಅಶೋಕ ರಸ್ತೆ, ಇರ್ವಿನ್ ರಸ್ತೆ, ಸಯ್ಯಜಿರಾವ್ ರಸ್ತೆ, ಡಿ.ದೇವರಾಜ ಅರಸು ರಸ್ತೆ, ನಾರಾಯಣಶಾಸ್ತ್ರಿ ರಸ್ತೆ, ಚಾಮರಾಜ ಜೋಡಿ ರಸ್ತೆ ಮೂಲಕ ಸಾಗಿ ಗನ್‌ಹೌಸ್ ವೃತ್ತದ ಬಳಿ ಅಂತ್ಯಗೊಂಡಿತು.