ಹನುಮಸಾಗರ: ಸಮೀಪದ ಕಾಟಾಪುರ ವಸತಿ ಶಾಲೆ ನೌಕರರು ಗುರುವಾರ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.
ಜಿಲ್ಲಾಧ್ಯಕ್ಷ ಗುರುಬಸಪ್ಪ ಮುಡಪಲದಿನ್ನಿ ಮಾತನಾಡಿ, ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ, ಜ್ಯೋತಿ ಸಂಜೀವಿನಿ ಅನುಷ್ಠಾನ, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸುವುದು, ಮನೆ ಬಾಡಿಗೆ ಕಡಿತದಿಂದ ವಿನಾಯಿತಿ, ಶೇ.10 ಭತ್ಯೆ ಮಂಜೂರಾತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.