ಹನೂರು : ಪಟ್ಟಣದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು 6 ತಿಂಗಳ ಹೆಣ್ಣು ಜಿಂಕೆ ಮರಿಯೊಂದು ಮೃತಪಟ್ಟಿದೆ. ಸಮೀಪದ ಅರಣ್ಯ ಪ್ರದೇಶದಿಂದ ವೈಶಂಪಾಳ್ಯ ಅಡ್ಡರಸ್ತೆಯ ಬಳಿಯ ಮ.ಬೆಟ್ಟದ ಮುಖ್ಯ ರಸ್ತೆಗೆ ಆಗಮಿಸಿದ್ದ ಜಿಂಕೆ ಮರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಈ ಬಗ್ಗೆ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಿಶೀಲಿಸಿ ಜಿಂಕೆಯ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಅರಣ್ಯ ಪ್ರದೇಶದಲ್ಲಿ ಹೂಳಲಾಯಿತು.